ಗೀಜಗನ ಗೂಡು ಹಾಗೂ ಹೆಣ್ಣು ಗಂಡು ಹಕ್ಕಿ ಪಾಡು
-ಡಿಜಿ ಮಲ್ಲಿಕಾರ್ಜುನ
ಸಾಮಾನ್ಯವಾಗಿ ಗೀಜುಗ ಹಕ್ಕಿಗಳ ವೈಶಿಷ್ಟ್ಯವೇನೆಂದರೆ, ಗಂಡು ಹಕ್ಕಿ ಗೂಡನ್ನು ಅರ್ಧ ನೇಯ್ದು ಹೆಣ್ಣಿಗೆ ತೋರಿಸುತ್ತದೆ. ಅದು ಹೆಣ್ಣಿಗೆ ಇಷ್ಟವಾದರೆ ಅವೆರಡೂ ಜೋಡಿಯಾಗುತ್ತವೆ, ಗೂಡನ್ನು ಪೂರ್ತಿ ಮಾಡಿ ಸಂಸಾರ ಸಾಗಿಸುತ್ತವೆ. ಅಕಸ್ಮಾತ್ ಇಷ್ಟವಾಗಲಿಲ್ಲವೋ ಗಂಡು ಮತ್ತೊಂದು ಗೂಡು ನೇಯಲು ಶುರುಮಾಡುತ್ತದೆ. ನಮಗೆ ಹತ್ತು ಬೆರಳುಗಳಿದ್ದರೂ ನೇಯಲು ಅಸಾಧ್ಯವಾದಂತಹ ಗೂಡನ್ನು ಪುಟ್ಟ ಇಕ್ಕಳದಂತಹ ಕೊಕ್ಕಿನಿಂದಲೇ ಈ ಪುಟ್ಟ ಹಕ್ಕಿ ನೇಯುವುದನ್ನು ನೋಡಿದರೆ ಇದರ ಸಾಮರ್ಥ್ಯಕ್ಕೆ ತಲೆದೂಗಲೇಬೇಕು. ಅದಕ್ಕೇ ಇದನ್ನು ನೇಕಾರ ಹಕ್ಕಿ ಎಂದೂ ಕರೆಯುತ್ತಾರೆ. [ಮುಂದೆ ಓದಿ…
]